ತೀರ್ಥಹಳ್ಳಿಯ ಅಳಿಯ ಈಗ ವಿಧಾನ ಪರಿಷತ್ ಸದಸ್ಯ

ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ
ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ತೀರ್ಥಹಳ್ಳಿಯ ಅಳಿಯ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ.

ಚುನಾವಣೆಯಲ್ಲಿ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ ಮೈತ್ರಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ, ಫಲಿತಾಂಶದಲ್ಲಿ ಮೈತ್ರಿಗೆ ಶಾಕ್‌ ಆಗಿದೆ. ಅಡ್ಡಮತದಾನದ ಪರಿಣಾಮ ಮೈತ್ರಿ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದಾರೆ.

5ನೇ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿನಯ್‌ ಕಾರ್ತಿಕ್‌ಗೆ 32 ಮತಗಳು ಬಿದ್ದಿವೆ. ನಿರೀಕ್ಷೆಗಿಂತ ಹೆಚ್ಚು ಮತಗಳು ಬಂದು ಕಾಂಗ್ರೆಸ್‌ ಅಭ್ಯರ್ಥಿ ಗೆದ್ದಿದ್ದಾರೆ. ಆದರೆ, ಗೋವಿಂದರಾಜುಗೆ ಕೇವಲ 14 ಮತಗಳು ಸಿಕ್ಕಿವೆ. ಬಿಜೆಪಿಯಿಂದ 7 ಮತ್ತು ಜೆಡಿಎಸ್‌ನಿಂದ 4 ಕ್ರಾಸ್‌ ವೋಟಿಂಗ್‌ ಆಗಿದೆ. ಈ ಎರಡೂ ಪಕ್ಷಗಳ ಮತ ಗಳಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post