ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಮರಗೆಸ ಎಲೆ ಕೀಳುವಾಗ ದುರ್ಘಟ‌ನೆ

ತೀರ್ಥಹಳ್ಳಿಯ ಲಕ್ಕಂದ ಸಮೀಪದ ಮರವೊಂದರಲ್ಲಿ ಪತ್ರೊಡೆ ತಯಾರಿಸಲು ಬಳಸುವ ಮರಗೆಸ ಎಲೆ ಕೀಳುವಾಗ ಮರ ಏರಿದ್ದ ಯುವಕ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

ಮೇಗರವಳ್ಳಿಯ ಕುರುಣಾಪುರಕ್ಕೆ ಹೋಗಿ ಹಿಂದಿರುಗುವಾಗ ಮರದ ಮೇಲೆ ಇದ್ದ ಮರಗೆಸವನ್ನು ಕೀಳಲು ತೆರಳಿದಾಗ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿ ಸ್ಪರ್ಶಿಸಿ ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತ ಯುವಕನನ್ನು ಇಂದಿರಾನಗರ ನಿವಾಸಿ ಅಭಿಷೇಕ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.

ಅವಿವಾಹಿತನಾಗಿದ್ದ ಅಭಿಷೇಕ್‌ ಶೆಟ್ಟಿಗೆ ತಂದೆ-ತಾಯಿ ಇರಲಿಲ್ಲ. ಚಿಕ್ಕಮನ ಮಗಳ ಮನೆಯಲ್ಲಿ ಅಭಿಷೇಕ್‌ ವಾಸವಾಗಿದ್ದರು. ಘಟನೆ ಸಂಬಂಧಿಸಿದಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post