ಶಿವಮೊಗ್ಗದಲ್ಲಿ ಆಗಸ್ಟ್‌ 2 ರಂದು ಪತ್ರಿಕಾ ದಿನಾಚರಣೆ

ವ್ಯಂಗ್ಯಚಿತ್ರಕಾರ ರಾಮಚಂದ್ರ ಕೊಪ್ಪಲುಗೆ ಜಿಲ್ಲಾ ಗೌರವ
ಶಿಕಾರಿಪುರ ಕೆ.ಎಸ್.‌ ಹುಚ್ರಾಯಪ್ಪಗೆ ಗೌರವ

ಸುಮಾರು 3 ದಶಕಗಳ ಕಾಲದಿಂದ ನಾಡಿನ ವಿವಿಧ ಪತ್ರಿಕೆ, ನಿಯತಕಾಲಿಕೆಗಳಲ್ಲಿ ವ್ಯಂಗ್ಯಚಿತ್ರಕಾರರಾಗಿ ಗುರುತಿಸಿಕೊಂಡಿರುವ ಪತ್ರಕರ್ತ ರಾಮಚಂದ್ರ ಕೊಪ್ಪಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಗೌರವಕ್ಕೆ ಪಾತ್ರರಾಗಿದ್ದಾರೆ.

ಇವರ ಜೊತೆಗೆ ಶಿಕಾರಿಪುರದ ಕೆ.ಎಸ್.‌ ಹುಚ್ರಾಯಪ್ಪ, ಹೊಳೆಹೊನ್ನೂರು ಅರಹತೊಳಲು ಕೆ.ರಂಗನಾಥ್‌, ಸೊರಬದ ಶಿವಪ್ಪ ಹಿತ್ಲರ್‌, ಭದ್ರಾವತಿ ಟಿ.ಎಸ್.ಆನಂದ ಕುಮಾರ್‌, ಸಾಗರದ ರಾಜೇಶ್‌ ಭಡ್ತಿ, ಹೊಸನಗರ ಪಿ.ಎನ್.ನರಸಿಂಹ ಮೂರ್ತಿ, ಟಿವಿ-9 ಛಾಯಚಿತ್ರಕಾರ ರಘುಕುಮಾರ್‌, ಜೈ ಕರುನಾಡು ಪತ್ರಿಕೆಯ ಸಂಪಾದಕ ನಾಗರಾಜ ಕಲ್ಕೊಪ್ಪ ಅವರುಗಳು ಜಿಲ್ಲಾ ಪತ್ರಕರ್ತರ ಸಂಘದ ಗೌರವಕ್ಕೆ ಪಾತ್ರರಾಗಿದ್ದಾರೆ.

ಆಗಸ್ಟ್‌ 2ರ ಭಾನುವಾರ ಬೆಳಿಗ್ಗೆ 10 ಗಂಟಗೆ ಪತ್ರಿಕಾ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post