ಟಿ.ಆರ್.‌ ಚಂದ್ರಶೇಖರ ನಿಧನ

ಏಪ್ರಿಲ್ 3ರಂದು ಮೇಳಿಗೆ ಸಮೀಪ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೇಳಿಗೆ-ಟೆಂಕಬೈಲ್ ನಿವಾಸಿ ಟಿ ಆರ್ ಚಂದ್ರಶೇಖರ (70) ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಿಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥಿವ ಶರೀರವನ್ನು ಇಂದು ರಾತ್ರಿ 9ಗಂಟೆಗೆ ಸ್ವಗೃಹಕ್ಕೆ ತರಲಿದ್ದು, ನಾಳೆ ಜುಲೈ 9 ಬೆಳಿಗ್ಗೆ 9ಗಂಟೆ ಗೆ ಸ್ವಗ್ರಾಮದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ  ಮೂಲಗಳು ತಿಳಿಸಿವೆ. ಅವರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಅಳಿಯಂದರು ಮೊಮ್ಮಕ್ಕಳು ಅಪಾರ ಬಂದುಗಳನ್ನು ಅಗಲಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post