ಅಂಗನವಾಡಿ ಮಕ್ಕಳ ಜೀವದ ಜೊತೆ ಆಡಳಿತದ ಚೆಲ್ಲಾಟ

ಹಳ್ಳದಂತಾದ ಲಿಂಗಾಪುರ ಅಂಗನವಾಡಿ ಕೇಂದ್ರ
ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಅಂಗನವಾಡಿ ಕೇಂದ್ರದ ಮುಂಭಾಗ ಬಾಕ್ಸ್ ಚರಂಡಿ ಇಲ್ಲದ ಹಿನ್ನಲೆಯಲ್ಲಿ ಊರಿನ ನೀರು ಅಂಗನವಾಡಿ ಕೇಂದ್ರದ ಮುಂಭಾಗ ಹರಿಯುವಂತಾಗಿದೆ. ಹತ್ತಾರು ಬಾರಿ ಗ್ರಾಮ ಪಂಚಾಯಿತಿಗೆ ದೂರು ನೀಡಿದರು ಆಡಳಿತ ಮಾತ್ರ ಕ್ರಮ ವಹಿಸುತ್ತಿಲ್ಲ.

ಹಳ್ಳದಂತಾದ ಅಂಗನವಾಡಿ ಕೇಂದ್ರದ ಮುಂಭಾಗದವನ್ನು ದಾಟಿ ಎಳೆಯ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ತೆರಳಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಜೋರು ಮಳೆಯಲ್ಲಿ ಮಕ್ಕಳು ಕೇಂದ್ರಕ್ಕೆ ತೆರಳುವಾಗ ಅಥವಾ ಕಾಲುಜಾರಿ ನೀರಿಗೆ ಬಿದ್ದರೆ ಜೀವಕ್ಕೆ ಹಾನಿಯುಂಟಾಗುವ ಸನ್ನಿವೇಶ ನಿರ್ಮಾಣವಾಗಿದೆ. ಮಂಡಗದ್ದೆ ಗ್ರಾಮ ಪಂಚಾಯಿತಿ ಪಿಡಿಓ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತಿಲ್ಲ. ಪ್ರಾಣಪಾಯ ಇದೆ ಎಂಬ ದೂರಿಗೆ ಕವಡೇಕಾಸಿನ ಕಿಮ್ಮತ್ತು ಸಿಗುತ್ತಿಲ್ಲ. ಸತ್ತ ಮೇಲೆ ಚರಂಡಿ ಮಾಡುತ್ತೀರಾ ಎಂದು ಪೋಷಕರು ಪ್ರಶ್ನಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post