ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವಾರ್ಷಿಕ ಮಹಾಸಭೆ

“ಮೌಲ್ಯಯುತ ರಾಜಕಾರಣದ ಅನಿವಾರ್ಯತೆ” ಬಗ್ಗೆ ಕಿಮ್ಮನೆ ವಿಷಯ ಮಂಡನೆ

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ಜಿಲ್ಲಾ ವಾರ್ಷಿಕ ಮಹಾಸಭೆ ಜುಲೈ 18ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕಾಂಗ್ರೆಸ್‌ ಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಮೌಲ್ಯಯುತ ರಾಜಕಾರಣದ ಅನಿವಾರ್ಯತೆ ಕುರಿತು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿಷಯ ಮಂಡಿಸಲಿದ್ದಾರೆ.

ವಾರ್ಷಿಕ ಮಹಾಸಭೆಯನ್ನು ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಧ್ಯಕ್ಷ ಧನರಾಜ್ ತಾಳಂಪಳ್ಳಿ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post