ರಾಕೇಶ್ ಸೀಬಿನಕೆರೆ ಇನ್ನಿಲ್ಲ

ದಸರಾದಲ್ಲಿ ಹುಲಿವೇಷಕ್ಕೆ ಹೆಜ್ಜೆ ಹಾಕುತ್ತಿದ್ದ ಕಲಾವಿದ

ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಹೊರಹೊಮ್ಮುತ್ತಿದ್ದ ತೀರ್ಥಹಳ್ಳಿಯ ಸೀಬಿನಕೆರೆ ನಿವಾಸಿ ರಾಕೇಶ್‌ (29) ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಯಹತ್ಯೆ ಎಂಬ ಊಹೆಗಳು ಇದ್ದು ಸಾವಿಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ.

ರಾಕೇಶ್‌ ಕಳೆದು ಮೂರು ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ನಡೆಯುತ್ತಿದ್ದ ದಸರಾ ಕಾರ್ಯಕ್ರಮದಲ್ಲಿ ಅತ್ಯಂತ ಖುಷಿಯಿಂದ ಹುಲಿವೇಷ ಹಾಕುವ ಮೂಲಕ ಕಲೆಯನ್ನು ಪೋಷಿಸಿಕೊಂಡು ಬಂದಿದ್ದರು. ಹುಲಿಹೆಜ್ಜೆ ಹಾಕುತ್ತಿದ್ದ ರಾಕಿ ಅನೇಕರ ಸ್ನೇಹವನ್ನು ಗಳಿಸಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post