ಜಿರಳೆ ಬೆಂಬಲಿಸಿ ನಾಳೆ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ ಹಾಗೂ ದೇಶದ ಇತರೆ ಕಡೆಗಳಲ್ಲಿ ಜಿರಳೆಗಳು ಅಲಿಯಾಸ್ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಪ್ರತಿಭಟನೆಯ ಸಂದರ್ಭ ದೆಹಲಿಯ ಪೊಲೀಸ್ ನಡೆಸಿರುವ ಲಾಠಿ ಪ್ರಹಾರ ಖಂಡಿಸಿ ತಾಲ್ಲೂಕು ಕಚೇರಿ ಮುಂಭಾಗ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಅಹಿಂದ ಸಂಘಟನೆ‌ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಸಚಿನ್ ಗರಗ ಹಾಗೂ ಕಾರ್ಯಾಧ್ಯಕ್ಷ ರಹಮತ್ ಉಲ್ಲಾ ಅಸಾದಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎಂದರೆ ದೇಶದ ಭವಿಷ್ಯ ಎಂಬುದನ್ನು ಮರೆತು ದೆಹಲಿ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಟಿಯರ್ ಗ್ಯಾಸ್, ವಾಟರ್ ಗನ್ ಬಳಸಿ ವಿದ್ಯಾರ್ಥಿ ಸಮೂಹವನ್ನು ಅಪರಾಧಿಗಳಂತೆ ಟ್ರೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಿಂಸಾ ಮಾರ್ಗವನ್ನು ಅನುಸರಿಸಿರುವುದು ಅಮಾನವೀಯ ನಡೆಯಾಗಿದೆ. ದೇಶದ ಭವಿಷ್ಯದ ಪ್ರಜೆಗಳು, ಪುಟಾಣಿ ಮಕ್ಕಳನ್ನು ಪೊಲೀಸರು ಹೊಡೆದು ಏನನ್ನು ಸಾಧಿಸಲು ಹೊರಟಿದ್ದಾರೆ. ನಾವು ಇದನ್ನು ಖಂಡಿಸುವ ಸಲುವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ದೆಹಲಿಗೆ ಹೋಗಲು ಆಗದೆ ಇಲ್ಲಿಯೇ ಪ್ರತಿಭಟನೆಗೆ ಬೆಂಬಲ ನೀಡುವ ಎಲ್ಲಾ ನಾಗರೀಕರು ತಾಲ್ಲೂಕು ಕಚೇರಿ ಮುಂಭಾಗ ಬನ್ನಿ ಎಂದು ಕರೆ ನೀಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post