ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಎಚ್.ಡಿ. ಧರ್ಮಣ್ಣ ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಶಿಕ್ಷಣ ಕ್ಷೇತ್ರದಲ್ಲಿ
ಅಪಾರ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಹದ್ಯೋಗಿಗಳ ಅಪಾರ ಗೌರವಕ್ಕೆ ಪಾತ್ರರಾಗಿದ್ದರು.
ಅವರ ಪಾರ್ಥಿವ ಶರೀರವನ್ನು ನಾಳೆ ಕೋಣಂದೂರಿನ ಹುಲ್ಲತ್ತಿಯ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ
ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
