ತೀರ್ಥಹಳ್ಳಿ ತಾಲ್ಲೂಕಿನ ಬಾಂಡ್ಯ-ಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೇಜನಗಲ್ ಎಸ್.ಆರ್.ರಾಮನಾಯ್ಕ (91 ವರ್ಷ) ಮಂಗಳವಾರ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಇಬ್ಬರು ಗಂಡು ಮಕ್ಕಳಾದ
ಬಾಂಡ್ಯ ಕುಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಆರ್. ಸತ್ಯನಾರಾಯಣ ಮತ್ತು ಕುಡುಮಲ್ಲಿಗೆ
ಸೊಸೈಟಿ ಮಾಜಿ ನಿರ್ದೇಶಕ ಎಸ್.ಆರ್. ಗಣೇಶ ಹಾಗೂ ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ
ಸಾಲೇಜನಗಲ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ 2.30ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
