ಟಿ.ಎಲ್.‌ ಸುಬ್ರಹ್ಮಣ್ಯ ಅಡಿಗ ನಿಧನ

8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ತೀರ್ಥಹಳ್ಳಿ ತಾಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಸಾಹಿತಿ, ಕವಿ ಅರಳಸುರಳಿಯ ಟಿ.ಎಲ್. ಸುಬ್ರಹ್ಮಣ್ಯ ಅಡಿಗ (90 ವರ್ಷ) ಶುಕ್ರವಾರ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅಡಿಗರು ಕಥೆ, ಕವನ ಮತ್ತು ಕಾದಂಬರಿ ಸೇರಿದಂತೆ ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು. ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಇವರು ಅಗಲಿದ್ದಾರೆ. ಅಡಿಗರ ಅಂತ್ಯ ಸಂಸ್ಕಾರವು ಶನಿವಾರ ಅರಳಸುರಳಿಯಲ್ಲಿ ನಡೆಯಲಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post