ಹೊದಲ ನಾಗರಾಜ ಆಚಾರ್ಯ ವಿಧಿವಶ

ವಿಶ್ವಕರ್ಮ ಚಂಡೆ ಬಳಗದ ಪ್ರಮುಖರು

ಹೊದಲ ವಿಶ್ವಕರ್ಮ ಚಂಡೆ ಬಳಗದ ಪ್ರಮುಖರಾದ ನಾಗರಾಜ ಆಚಾರ್ಯ ತೀವ್ರ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.

ಹೊದಲ ಸ್ಪೋರ್ಟ್ಸ್ ಅಸೋಸಿಯೇಷನ್ ಸದಸ್ಯ, ಹೊದಲ ಶ್ರೀ ಗಣಪತಿ ಸೇವಾ ಸಮಿತಿಯ ಅದ್ಯಕ್ಷ, ವಿಶ್ವಕರ್ಮ ಚಂಡೆ ಬಳಗದ ಪ್ರಮುಖರಾಗಿದ್ದ ಅವರು ರಾಜ್ಯದ ಅನೇಕ ಕಡೆಗಳಲ್ಲಿ ಸಾಮಾಜಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಚಂಡೆ ವಾದನದಲ್ಲಿ ಭಾಗವಹಿಸುತ್ತಿದ್ದರು. ಅವರಿಗೆ ಪತ್ನಿ, ಎರಡು ಗಂಡು ಮಕ್ಕಳು ಇದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post