ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಶಿವಣ್ಣ ನಿಧನ

ಆಗುಂಬೆ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಣ್ಣ
ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಶಿವಣ್ಣ (52) ತೀವ್ರ ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ. ಆಗುಂಬೆಯಲ್ಲಿ ಹೃದಯಾಘಾತ ಸಂಭಿಸಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಎತ್ತರವಿದ್ದ ಶಿವಣ್ಣ ಬಹಳ ಚಿರಪರಿಚಿತರಾಗಿದ್ದರು. ಯೌವನದಲ್ಲಿ ಗಲಾಟೆ, ದೊಂಬಿಯಂತಹ ಪ್ರಕರಣದಲ್ಲಿ ಒಬ್ಬರೇ ಏಕಾಂಗಿಯಾಗಿ ಗಲಾಟೆ ಹದ್ದುಬಸ್ತಿಗೆ ತರುತ್ತಿದ್ದರು. ಅವರಿಗೆ ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳು ಇದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post