ಕುವೆಂಪು ವಿವಿಯಿಂದ ಸಂಗೀತಂ ಬಿ. ಜಿ.ಗೆ ಪಿಎಚ್‌ಡಿ

ಕುವೆಂಪು ವಿವಿಯಿಂದ ಸಂಗೀತಂ ಬಿ. ಜಿ.ಗೆ ಪಿಎಚ್‌ಡಿ
ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾರ್ಥಿ ಸಂಗೀತಂ ಬಿ. ಜಿ. ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಘೋಷಿಸಿದೆ.
ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಸತೀಶ್ ಕುಮಾರ್ ಅಂಡಿಂಜೆ ಮಾರ್ಗದರ್ಶನದಲ್ಲಿ 'ಜನಪದ ಕಲೆಗಳು ಮತ್ತು ಕನ್ನಡ ಸಿನೇಮಾ: ಒಂದು ವಿಶ್ಲೇಷಣಾತ್ಮಕ ಅಧ್ಯಯನ' ಎಂಬ ಶೀರ್ಷಿಕೆಯಡಿ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದಾರೆ.

ತೀರ್ಥಹಳ್ಳಿಯ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮತ್ತು ಸರ್ಕಾರಿ ಪ್ರೌಢಶಾಲೆ ಬಿಳಲುಕೊಪ್ಪದಲ್ಲಿ ಪ್ರೌಢ ಶಿಕ್ಷಣವನ್ನು ಪಡೆದ ಅವರು ತುಂಗಾ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.
ಬಾಲ್ಯದಿಂದಲೂ ಪತ್ರಿಕೋದ್ಯಮ ವಿಷಯದಲ್ಲಿ ಅಪಾರ ಆಸಕ್ತಿ‌ ಹೊಂದಿದ್ದ ಇವರು ಶಿವಮೊಗ್ಗದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುವಾಗಲೇ ಪತ್ರಿಕೋದ್ಯಮ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು. ನಂತರ ಅದೇ ವಿಷಯದಲ್ಲಿ ಅವರು ಸ್ನಾತಕೋತ್ತರ ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದರು. 
ಮೂಲತಃ ತೀರ್ಥಹಳ್ಳಿ ತಾಲ್ಲೂಕಿನ ಬಾಳುಗೋಡು ಗ್ರಾಮದವರಾದ ಇವರು ತುಂಗಾ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಬಿ.ಗಣಪತಿ ಮತ್ತು ಉಪನ್ಯಾಸಕಿ ಡಿ.ಎಸ್. ಪುಷ್ಪಾವತಿ ದಂಪತಿಯ ಪುತ್ರ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post