ಅಕ್ಷಾಲಕೊಪ್ಪ ರೇಖಾ ವೆಂಕಟೇಶ್ ನಿಧನ

ಪರಿಶ್ರಮದ ಬದುಕು ಕಟ್ಟಿಕೊಳ್ಳುತ್ತಿದ್ದ ಛಲಗಾತಿ ಮಹಿಳೆ

ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯ ಸ್ವಚ್ಚತಾ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ಷಾಲಕೊಪ್ಪ ನಿವಾಸಿ ರೇಖಾ ವೆಂಕಟೇಶ್‌ ಮಂಗಳವಾರ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಾತ್ರೆ, ಹಬ್ಬ, ಇನ್ನಿತರ ಸಮಾರಂಭದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಅಲ್ಲದೆ ಸಾಮಾಜಿಕ ಹೋರಾಟಗಳಲ್ಲಿಯೂ ಭಾಗವಹಿಸುತ್ತಿದ್ದ ಅವರು ಎಂತಹ ಕಷ್ಟದ ಸಂದರ್ಭದಲ್ಲಿಯೂ ಎದೆಗುಂದದೆ ಮುನ್ನುಗ್ಗುತ್ತಿದ್ದರು.

ಪತಿ ವೆಂಕಟೇಶ್ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post