ಜಿಲ್ಲಾ ಗಣಿತ-ವಿಜ್ಞಾನ ಮೇಳದಲ್ಲಿ ಅನರ್ಘ್ಯ ಪಿ. ಹೊಳ್ಳ ಪ್ರಥಮ

ಎಐ ಆಧಾರಿತ ಅಡಿಕೆ ಆರಿಸುವ ಮಾದರಿ ಯಂತ್ರ ಪ್ರದರ್ಶಿಸಿದ ಅನರ್ಘ್ಯ
ತೀರ್ಥಹಳ್ಳಿಯ ಸೇವಾಭಾರತಿ ಪ್ರೌಢಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ಪಿ. ಹೊಳ್ಳ ತಯಾರಿಸಿದ ಕೃತಕ ಬುದ್ಧಿಮತ್ತೆ ಆಧಾರಿತ ಅಡಿಕೆ ವಿಂಗಡಿಸುವ ಮಾದರಿ ಯಂತ್ರಕ್ಕೆ ಪ್ರಥಮ ಸ್ಥಾನ ಲಭಿಸಿದೆ.

ವಿದ್ಯಾಭಾರತಿ ಕರ್ನಾಟಕ, ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಸಹಯೋಗದಲ್ಲಿ ಶಿಕಾರಿಪುರ ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ಆಗಸ್ಟ್ 25, 26 ರಂದು ನಡೆದ ಗಣಿತ-ವಿಜ್ಞಾನ ಮೇಳದ ಬಾಲವರ್ಗ ವಿಭಾಗದ ನವಚಾರಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

​ಕಡಿಮೆ ವೆಚ್ಚದಲ್ಲಿ, ಅಡಿಕೆಯ ಗುಣಮಟ್ಟವನ್ನು ನಿಖರವಾಗಿ ಗುರುತಿಸಿ ವಿಂಗಡಿಸುವ ಕಲ್ಪನೆ ಕೃಷಿಕರ ಶ್ರಮವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ತಂತ್ರಜ್ಞಾನ ಅಭಿವೃದ್ಧಿಗೆ ಈ ಮಾದರಿ ಉಪಯೋಗವಾಗಿದೆ.

ಮಲೆನಾಡು ಪ್ರದೇಶವು ತನ್ನ ಕೃಷಿ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಪದ್ಧತಿಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಕಾರ್ಮಿಕರ ಅಭಾವ ತೀವ್ರವಾಗುತ್ತಿದ್ದು, ಇದನ್ನು ಎದುರಿಸಲು ಆಧುನಿಕ ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ. ಅಡಿಕೆ ಕೊಯ್ಯಲು ಹಗುರವಾದ ಫೈಬರ್ ಹಾಗೂ ಕಾರ್ಬನ್ ದೋಟಿ, ಸಿಪ್ಪೆ ಸುಲಿಯುವ ಯಂತ್ರ ಈಗಾಗಲೇ ಬಳಕೆಯಲ್ಲಿದ್ದು, ಕೃಷಿ ಚಟುವಟಿಕೆಯನ್ನು ಒಂದಷ್ಟು ಸುಲಭಗೊಳಿಸಿವೆ. ಆದರೆ, ಸುಲಿದ ಅಡಿಕೆಯನ್ನು ಬೇಯಿಸಿ, ಒಣಗಿಸಿದ ನಂತರ ಅದನ್ನು ಗುಣಮಟ್ಟಕ್ಕೆ ತಕ್ಕಂತೆ ನಾಲ್ಕು ವಿಭಾಗಗಳಾಗಿ ಕೈಯಿಂದ ವಿಂಗಡಿಸುವುದು ಅತ್ಯಂತ ಶ್ರಮದಾಯಕ ಹಾಗೂ ಸುದೀರ್ಘ ಸಮಯ ತೆಗೆದುಕೊಳ್ಳುವ ಸವಾಲಿನ ಕೆಲಸವಾಗಿ ಉಳಿದಿತ್ತು.

ಈ ಸಾಂಪ್ರದಾಯಿಕ ಸಮಸ್ಯೆಗೆ ತಂತ್ರಜ್ಞಾನದ ಮೂಲಕ ಸೃಜನಶೀಲ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತೀರ್ಥಹಳ್ಳಿಯ ಹಿರಿಯ ಪತ್ರಕರ್ತ ಪ್ರಸನ್ನ ಹೊಳ್ಳ ಹಾಗೂ ಸಂಸ್ಕೃತ ಪ್ರಾಧ್ಯಾಪಕಿ ಪ್ರಭಾ ಹೊಳ್ಳ ದಂಪತಿಯ ಪುತ್ರಿ, ತೀರ್ಥಹಳ್ಳಿಯ ಸೇವಾ ಭಾರತಿ ಶಾಲೆಯ ವಿದ್ಯಾರ್ಥಿನಿ ಅನರ್ಘ್ಯ ಪಿ. ಹೊಳ್ಳ ಅವರು ಅತ್ಯುತ್ತಮ 'ಎ ಐ (AI) ಆಧಾರಿತ ಅಡಿಕೆ ವಿಂಗಡಣಾ ಯಂತ್ರ'ದ ಮಾದರಿಯನ್ನು ಅಭಿವೃದ್ಧಿಪಡಿಸಿ ಭರವಸೆ ಮೂಡಿಸಿದ್ದಾರೆ. ವಿಜ್ಞಾನ ಮಾದರಿಯಾಗಿ ರೂಪುಗೊಂಡಿರುವ ಈ ಯಂತ್ರವು ಕೃತಕ ಬುದ್ಧಿಮತ್ತೆ ಮತ್ತು ಮೈಕ್ರೋಕಂಟ್ರೋಲರ್ ತಂತ್ರಜ್ಞಾನವನ್ನು ಅತ್ಯಂತ ಸಾಮರಸ್ಯದಿಂದ ಸಂಯೋಜಿಸಿ ನಿರ್ಮಿಸಲಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post