ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಇಂದು ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನ

ಜಗದೀಶ್ ಬಿ. ಶಿಲ್ಪಕಲಾಕೃತಿಯ ಎಕ್ಸಿಬಿಷನ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕಲಾವಿದ ಜಗದೀಶ್ ಬಿ. ಅವರ ‘ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನ ಭಾನುವಾರ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 8 ಗಂಟೆಯ ತನಕ ಪ್ರದರ್ಶನಗೊಳ್ಳಲಿದೆ.

ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ನಟಮಿತ್ರರು ತಂಡದ ಅಧ್ಯಕ್ಷ ಸಂದೇಶ್ ಜವಳಿ, ಯಕ್ಷಗಾನ ಕಲಾವಿದ, ಪತ್ರಕರ್ತ ಬಿ. ಗಣಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ತಹಶೀಲ್ದಾರ್ ಎಸ್. ರಂಜಿತ್  ಭಾಗವಹಿಸಲಿದ್ದಾರೆ.

ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ. ಕಲಾಕೃತಿಯನ್ನು ಮುಕ್ತವಾಗಿ ವೀಕ್ಷಿಸಬಹುದು.  ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರದರ್ಶನವನ್ನು ವೀಕ್ಷಿಸುವಂತೆ ಶಿಲ್ಪಕಲಾವಿದ ಜಗದೀಶ್ ಬಿ. ಕೋರಿಕೊಂಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post