ಗುಟ್ಕಾ- ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ

ಗುಟ್ಕಾ ನಿಷೇಧ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದು – ಆರೋಗ್ಯ ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿರುವ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರ ಆರೋಗ್ಯದ ದೃಷ್ಟಿಯಿಂದ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧಿಸಲಾಗಿದೆ. ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಗುಟ್ಕಾ ಉತ್ಪಾದನೆಯಲ್ಲಿ ಕರ್ನಾಟಕದ ಅಡಿಕೆಯನ್ನು ಬಳಸಲಾಗುತ್ತಿಲ್ಲ. ಬದಲಾಗಿ ನೇಪಾಳ ಹಾಗೂ ಬಾಂಗ್ಲಾದೇಶದಿಂದ ಅಡಿಕೆ ಆಮದು ಮಾಡಿಕೊಂಡು ಗುಟ್ಕಾ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಇಲಾಖೆ ಅಡಿಕೆ ಬೆಳೆಗಾರರು, ರೈತರು ಹಾಗೂ ವ್ಯಾಪಾರಿಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡಲಿದೆ. ನಿಷೇಧದಿಂದ ಅಡಿಕೆ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಬದಲು, ಅಡಿಕೆ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಅಭಿಪ್ರಾಯವನ್ನೂ ಸಚಿವರು ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ನಿರ್ಧಾರವು ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ವಿರುದ್ಧವಾಗಿಲ್ಲ. ರೈತರಿಗೆ ಅಗತ್ಯವಾದ ಬೆಂಬಲ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಗುಟ್ಕಾ ಹಾಗೂ ಪಾನ್ ಮಸಾಲ ಬಳಕೆಯಿಂದ ಸಾರ್ವಜನಿಕ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಪರಿಗಣಿಸಿ ನಿಷೇಧ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post