ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲದು

ತೀರ್ಥಹಳ್ಳಿಯಲ್ಲಿ ಪ್ರವಾಸೋದ್ಯಮಕ್ಕೆ ಉಜ್ವಲ ಅವಕಾಶ – ಆರ್‌.ಎಂ.ಮಂಜುನಾಥ ಗೌಡ

ಅಭಿವೃದ್ಧಿ ವಿಚಾರದಲ್ಲಿ ಎಲ್ಲಾ ಪಕ್ಷದವರು ಒಂದಾಗಬೇಕು. ಇದರಲ್ಲಿ ರಾಜಕೀಯ ಸಲ್ಲದು ಎಂಬುದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನಿಲುವು. ತೀರ್ಥಹಳ್ಳಿಯಲ್ಲಿಯೂ ಕೂಡ ಈ ಪರಂಪರೆ ಆರಂಭವಾಗಬೇಕು. ಅಭಿವೃದ್ಧಿ ವಿಚಾರದಲ್ಲಿ ಶಾಸಕರ ಜೊತೆ ಸಮನ್ವಯ ಇರಲೇಬೇಕಾಗುತ್ತದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಹೇಳಿದ್ದಾರೆ.

ಇಂದು ತೀರ್ಥಹಳ್ಳಿಯ ಆಗುಂಬೆ ವೃತ್ತದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಿಂದ ನಿರ್ಮಿಸಲಾದ ನೂತನ ಬಸ್‌ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ತೀರ್ಥಹಳ್ಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶ ಇದೆ. ಇದು ಯುವಜನತೆಗೆ ಹೊಸ ಉದ್ಯೋಗ ಸೃಷ್ಠಿಗೂ ಅವಕಾಶ ನೀಡುತ್ತದೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಮುಂದೆ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು ಎಂದವರು ಹೇಳಿದ್ದಾರೆ.

ಆಕರ್ಷಕ ಬಸ್‌ ನಿಲ್ದಾಣಗಳು ಪಟ್ಟಣದ ಸೌಂದರ್ಯ ಮತ್ತು ನಾಗರೀಕರ ಸದಾಭಿರುಚಿಯನ್ನು ಬಿಂಬಿಸುತ್ತದೆ. ಇಂಗ್ಲೆಂಡಿನಲ್ಲಿ ಬಸ್‌ ನಿಲ್ದಾಣಗಳು ಅತ್ಯಂತ ಆಕರ್ಷಕವಾಗಿದ್ದು ಶೌಚಾಲಯ, ವಿಶ್ರಾಂತಿ ಕೊಠಡಿಯನ್ನು ಹೊಂದಿರುತ್ತವೆ. ಆ ಮಾದರಿಯನ್ನು ಇಲ್ಲಿ ಉಪಯೋಗಿಸಿಕೊಂಡು ನಿರ್ಮಿಸಲಾಗುತ್ತಿದೆ. ಸ್ವಚ್ಚತೆಯನ್ನು ಕಾಪಾಡುವುದು ಎಲ್ಲರ ಹೊಣೆಗಾರಿಕೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಚೀಂದ್ರ ಹೆಗ್ಡೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಉಪಾಧ್ಯಕ್ಷೆ ಗೀತಾ ರಮೇಶ್‌, ಸದಸ್ಯರಾದ ಶಬನಮ್‌, ಸುಶೀಲ ಶೆಟ್ಟಿ, ಮಂಜುಳಾ ನಾಗೇಂದ್ರ, ಜೀನಾ ವಿಕ್ಟರ್‌, ಟಿ.ಎಲ್.ಸುಂದರೇಶ್‌, ಬಿ.ಆರ್.ರಾಘವೇಂದ್ರ ಶೆಟ್ಟಿ, ಡಾ.ಅನಿಲ್‌, ಕುರುವಳ್ಳಿ ನಾಗರಾಜ್‌, ಹಸಿರುಮನೆ ಮಹಾಬಲೇಶ್‌, ತಹಶೀಲ್ದಾರ್‌ ರಂಜಿತ್‌ ಮುಂತಾದವರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post