ಕಲ್ಪವೃಕ್ಷ ಸಹಕಾರ ಸಂಘಕ್ಕೆ 11 ಲಕ್ಷ ಲಾಭ

ತೀರ್ಥಹಳ್ಳಿ ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲಿರುವ ಕಲ್ಪವೃಕ್ಷ ಪತ್ತಿನ ಸಹಕಾರ ಸಂಘ ವಾರ್ಷಿಕ 3.28 ಕೋಟಿ ವ್ಯವಹಾರ ನಡೆಸಿ 11 ಲಕ್ಷಕ್ಕೂ ಹೆಚ್ಚಿನ ಮೊತ್ತದ ಲಾಭಗಳಿಸಿದೆ. ಒಟ್ಟಾರೆ 475 ಷೇರುದಾರ ಸದಸ್ಯರಿಗೆ 2.94 ಕೋಟಿ ಜಾಮೀನು ಹಾಗೂ ಸ್ಥಿರಾಸ್ಥಿ, ಅಡಮಾನ ಸಾಲವನ್ನು ನೀಡಿದ್ದು ಮಾರ್ಚ್‌ ಅಂತ್ಯಕ್ಕೆ 96% ವಸೂಲಿಯಾಗಿದೆ. ದಶಮಾನೋತ್ಸವ ಸಂದರ್ಭದಲ್ಲಿ ಪಟ್ಟಣದಲ್ಲಿ ಸಂಘವು ಸ್ವಂತ ನಿವೇಶನ ಖರೀದಿಸಲು ಮುಂದಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಎಂದು ಸಂಘದ ಅಧ್ಯಕ್ಷ ಇ.ವಿ.ಶ್ರೀಧರಮೂರ್ತಿ ತಿಳಿಸಿದರು.

ಸರ್ವ ಸದಸ್ಯರ ಸಭೆ ಸೆಪ್ಟೆಂಬರ್‌ 10ರ ಗುರುವಾರ ಇಲ್ಲಿನ ಬಂಟರ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಬಸವಾನಿ ವಿಜಯದೇವ್‌ ಭಾಗವಹಿಸಲಿದ್ದಾರೆ. ಡಿಸಿಸಿ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ಟಿ.ವಿ.ರಾಮಚಂದ್ರ ಅವರನ್ನು ಗೌರವಿಸಲಾಗುತ್ತದೆ ಎಂದರು.

ಉಪಾಧ್ಯಕ್ಷ ಚಿಡುವ ಮಂಜುನಾಥ, ಸದಸ್ಯರಾದ ಈಶ್ವರ ನಾಯ್ಕ, ವಿಶಾಲ್‌ ಕುಮಾರ್‌, ಕೆ.ಎಸ್.ಮೂರ್ತಿ, ವಳಗೆರೆ ಶ್ರೀನಿವಾಸ್‌, ಎಂ.ದಿನೇಶ್‌, ಬಿ.ಎಸ್.ಸುಬ್ರಹ್ಮಣ್ಯ, ಕೆ.ಎಲ್.ಪುಟ್ಟಸ್ವಾಮಿ, ಕೆ.ಸಿ.ರೂಪ, ಬಿ.ಎಸ್.‌ಅನಿತ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಣಿ, ಸಹಾಯಕಿ ಶ್ರೇಯ ಮತ್ತಿತರರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post