ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ನೀರುಗಂಟಿ, ಚಾಲಕ, ಗಾರೆ ಕೆಲಸದ ಕಾರ್ಮಿಕರಾಗಿ ದುಡಿಯುತ್ತಿದ್ದ ರಾಜುಶೆಟ್ಟಿ (51 ವರ್ಷ) ತೀವ್ರ ಜ್ವರದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು.
ಸಾರ್ವಜನಿಕ ವಲಯದಲ್ಲಿ ಅಪಾರ ಪ್ರೀತಿ, ವಿಶ್ವಾಸ ತೋರುತ್ತಿದ್ದ ರಾಜುಶೆಟ್ಟಿ ಅಕಾಲಿಕ ಸಾವು ಸಾರ್ವಜನಿಕರಲ್ಲಿ ತೀವ್ರ ದಿಗ್ಭ್ರಮೆ ಮೂಡಿಸಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.