ಅನೇಕ ಜನಪರ ಹೋರಾಟ, ಸೇವೆಗಳ ಮೂಲಕ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ತಾಲೂಕಿನ ಉಂಟೂರುಕಟ್ಟೆ ಗ್ರಾಮದ ಇಂದಿರಾ ಮಂಜುನಾಥ್ ( 63) ಭಾನುವಾರ ಬೆಳಗ್ಗೆ ನಿಧನ ಹೊಂದಿದರು. ಮುಳುಬಾಗಿಲು ಗ್ರಾಮ ಪಂಚಾಯಿತಿಗೆ 2 ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇಂದಿರಾ ಮಂಜುನಾಥ್ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು.