ಪ್ರಥಮ‌ ದರ್ಜೆ ಕಾಲೇಜಿನಲ್ಲಿ ಸಾಧಕರಿಗೆ ಗೌರವ

ಸಾಧನೆಗೆ ಬಡತನ ಅಡ್ಡಿಯಲ್ಲ - ಎಸ್.ರತ್ನಕುಮಾರಿ
ಸವಾಲು ಮೆಟ್ಟಿನಿಂತರೆ ಯಶಸ್ಸು - ದೀಪಾ ಹಿರೇಗುತ್ತಿ
ಸಾಧನೆಗೆ ಬಡತನ ಅಡ್ದಿಯಲ್ಲ, ಸ್ಪಷ್ಟ ಗುರಿ ಹಾಗೂ ಶೃದ್ದೆಯಿಂದ ಅಭ್ಯಾಸ ಮಾಡಿದರೆ ಶಿಕ್ಷಣ ಯಾರನ್ನೂ ದೂರ ಮಾಡುವುದಿಲ್ಲ ಎಂದು ರಾಷ್ಟಿಯ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್ ರತ್ನಕುಮಾರಿ ಹೇಳಿದ್ದಾರೆ 

ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸಾಂಸ್ಕೃತಿಕ ವೇದಿಕೆ ಹಾಗೂ ಇತರೆ ವೇದಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು ಬಡತನವೆ ನನಗೆ ಶಿಕ್ಷಕಿ ಆಗಲು ಪ್ರೇರಣೆ ನೀಡಿತು. ಅಂದು ಪಾಠ ಮಾಡಿದ ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಿದರು. ಗುರು ಮತ್ತು ಗುರಿ ಇದ್ದಾಗ ಸಾಧನೆ ಕಷ್ಟವಲ್ಲ ಎಂದರು.

ಲೇಖಕಿ ದೀಪಾ ಹಿರೇಗುತ್ತಿ ಕಾಲೇಜಿನಲ್ಲಿ ವಿವಿಧ ಸೃಜನ ಶೀಲ ವೇದಿಕೆಗಳಿದ್ದು, ಇವುಗಳ ಮೂಲಕ ವ್ಯಕ್ತಿತ್ವ ವಿಕಸನ  ಸಾಧ್ಯವಾಗುತ್ತದೆ. ಕ್ರೀಡೆ, ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್ ಹಾಗೂ ಇತರೆ ಚಟುವಟಿಕೆಗಳನ್ನು ನಿಮ್ಮನ್ನು ಗುರುತಿಸಲು ಸೂಕ್ತವಾದ ವೇದಿಕೆಗಳಿವೆ ಅವುಗಳನ್ನು ಬಳಸಿಕೊಂಡು ಅತ್ಮವಿಶ್ವಾಸ  ಬೆಳಸಿಕೊಳ್ಳಬೇಕು. ಸಾಧನೆ ಮಾಡಿದ ಸಾಧಕರೆಲ್ಲರೂ ನಿಮ್ಮ ಹಾಗೆ ತರಗತಿಯಲ್ಲಿ ವಿದ್ಯಾರ್ಥಿಗಳಾಗಿದ್ದು, ಅವರು ಕೂಡ ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಿ ಯಶಸ್ಸಿನ ಮೆಟ್ಟಿಲನ್ನು ಏರಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಅಬ್ದುಲ್ ರೆಹಮಾನ್ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ 25000 ರೂಗಳ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳಿಗೆ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್‌ ಪಡೆದ 4 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸೌಮ್ಯ ಕೆ.ಸಿ. ವಹಿಸಿದ್ದರು.

ಐಕ್ಯೂಎಸಿ ಸಂಚಾಲಕ ಡಾ. ಗಣಪತಿ ಹೆಚ್. ಎ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಕೃಷ್ಣಮೂರ್ತಿ ಕೆ ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post