ಅವಿನಾಶ್‌ ಜಾದವ್‌ ಅಕಾಲಿಕ ನಿಧನ


ತೀರ್ಥಹಳ್ಳಿಯ ರಂಜದಕಟ್ಟೆಯ ಅವಿನಾಶ್‌ ಜಾದವ್‌ (36) ಶುಕ್ರವಾರ ನಿಧನರಾದರು. ಲವಲವಿಕೆ ವ್ಯಕ್ತಿತ್ವದ, ಜೀವನೋಪಾಯಕ್ಕಾಗಿ ಲಾರಿ ಚಲಾಯಿಸುತ್ತಿದ್ದ ಅಪಾರ ಶ್ರಮಜೀವಿಯಾಗಿದ್ದ ಅನಿನಾಶ್‌ ತಮ್ಮ ಅಜಾತಶತ್ರು ವ್ಯಕ್ತಿತ್ವದಿಂದ ಎಲ್ಲರಿಗೂ ಬೇಕಾದವರಾಗಿ ಜನಪ್ರಿಯರಾಗಿ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಇತ್ತೀಚೆಗೆ ಅವರಿಗೆ ಜಿಬಿಎಸ್‌ ಎಂಬ ನರಮಂಡಲದ ಮೇಲೆ ತೀವ್ರ ದಾಳಿ ನಡೆಸುವ ಅತಿ ಅಪರೂಪದ ಕಾಯಿಲೆ ಪತ್ತೆಯಾಗಿತ್ತು.

ಆರಂಭಿಕ ಹಂತದಲ್ಲಿ ಅವರ ಬಂಧು ಬಳಗ ಸ್ನೇಹಿತರೆಲ್ಲರೂ ಸೇರಿ ಹಣ ಒಗ್ಗೂಡಿಸಿ ಚಿಕಿತ್ಸೆಗೆ ನೆರವಾಗಿದ್ದರು. ಆದರೆ ಅತ್ಯಂತ ದುಬಾರಿ ವೆಚ್ಚದ ಹಾಗೂ ಚಿಕಿತ್ಸೆ ನೀಡಿದರು ಪೂರ್ತಿ ಗುಣಮುಖರಾಗುತ್ತಾರೆ ಎಂಬ ನಂಬಿಕೆ ಇರದ ಈ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅಂತಿಮವಾಗಿ ಅವರು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದರು.
ಅಲ್ಲಿಯೇ ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಪತ್ನಿ, ಎರಡು ವರ್ಷದ ಪುಟ್ಟ ಮಗು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post